New Ration Card Application: ಬಂತು ನೋಡಿ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್, ಈ ದಿನಾಂಕದ ಒಳಗಡೆ ಹೊಸ ರೇಷನ್ ಕಾರ್ಡಿಗೆ ನೀವು ಅರ್ಜಿ ಸಲ್ಲಿಸಿ
ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಹೌದು ಸ್ನೇಹಿತರೆ ಅರ್ಹತೆ ಹೊಂದಿದಂತ ಕುಟುಂಬಗಳಿಗೆ ಹಾಗೂ ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಇದೀಗ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವಾಗ ಇದೆ ಎಂಬ ಮಾಹಿತಿ ತಿಳಿಯೋಣ,
ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಇನ್ನು ಕೆಲವೇ ದಿನಗಳ ಕಾಲ ಅಂದರೆ ಇನ್ನು ಐದು ದಿನಗಳವರೆಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಲೇಖನಯ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡುವಂತಹ ಜನರಿಗೆ ಈ ಲೇಖನ ಶೇರ್ ಮಾಡಿ
ರೇಷನ್ ಕಾರ್ಡ್ ಏಕೆ ಬೇಕು (New Ration Card Application).?
ರೇಷನ್ ಕಾರ್ಡ್ ಎಂಬುದು ಈಗ ಅತಿ ಮುಖ್ಯವಾದ ದಾಖಲಾತಿಯಾಗಿದೆ ಇದರ ಜೊತೆಗೆ ನಮ್ಮ ಕರ್ನಾಟಕ ಅಥವಾ ನಮ್ಮ ದೇಶದಲ್ಲಿ ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಬಂದಿದವರನ್ನು ಬಡವರು ಅಥವಾ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳೆಂದು ಗುರುತಿಸಲು ರೇಷನ್ ಕಾರ್ಡ್ ಒಂದು ಮಾನದಂಡ ಅಥವಾ ಆಧಾರವಾಗಿ ಬಳಸಲಾಗುತ್ತಿದೆ ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಿಗೆ ಅರ್ಹತೆ ಪಡೆದುಕೊಳ್ಳಲು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ.

ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು, ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತ ಗ್ಯಾರೆಂಟಿ ಯೋಜನೆಗಳಿಂದ ಏನೆಲ್ಲಾ ಅಂದರು ತಿಂಗಳಿಗೆ ಸುಮಾರು ₹3,000 ರಿಂದ ₹4,000 ಸಾವಿರದವರೆಗೆ ನೇರವಾಗಿ ಲಾಭ ಪಡೆಯಬಹುದು ಇದರ ಜೊತೆಗೆ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರತಿ ತಿಂಗಳು ಉಚಿತ ಅಕ್ಕಿ ಪಡೆದುಕೊಳ್ಳಲು ಅವಕಾಶವಿದೆ
ಇದರ ಜೊತೆಗೆ ಎಲ್ಲಾ ಸರ್ಕಾರದ ಯೋಜನೆಗಳ ಲಾಭ ಪಡೆಯಲು ಹಾಗೂ ಇತರ ವೈದ್ಯಕೀಯ ಚಿಕಿತ್ಸೆಗಳಿಗೆ ಸರ್ಕಾರ ಕಡೆಯಿಂದ ನಿರೂಪ ಪಡೆಯಲು ರೇಷನ್ ಕಾರ್ಡ್ ಹೊಂದಿರುವುದು ಅಗತ್ಯವಾಗಿದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇದೀಗ ಎದುರು ನೋಡುತ್ತಿದ್ದಾರೆ ಅಂತವರಿಗೆ ಈಗ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.
ಹೊಸ ರೇಷನ್ (New Ration Card Application) ಕಾರ್ಡ್ ಅರ್ಜಿ ಪ್ರಾರಂಭ..?
ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಬಯಸುವಂತಹ ಕುಟುಂಬಗಳಿಗೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ 30 ಜೂನ್ 2025 ರವರೆಗೆ ಪ್ರಸ್ತುತ ರಾಜ್ಯ ಸರ್ಕಾರ ಆಹಾರ ಇಲಾಖೆಯ ಮೂಲಕ ಅವಕಾಶ ಮಾಡಿಕೊಟ್ಟಿದೆ ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ಜೂನ್ 30ರವರೆಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಹಾಗು ತಿದ್ದುಪಡಿ ಮಾಡಲು ಬಯಸುವವರು ಕೂಡಲೇ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಪ್ರಸ್ತುತ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರು ಈ ಶ್ರಮ ಕಾರ್ಡ್ ಹೊಂದಿದ್ದರೆ ಮಾತ್ರ ಇದೀಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಹಾಗಾಗಿ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಆನ್ಲೈನ್ ಕೇಂದ್ರ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ..?
- ಈ ಶ್ರಮ ಕಾರ್ಡ್ (ಕಡ್ಡಾಯವಾಗಿ ಬೇಕು)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಜೆರಾಕ್ಸ್
- ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
- ವೋಟರ್ ಐಡಿ
- ವಿಳಾಸದ ಪುರಾವೆಗಳು
- ಇತರೆ ಅಗತ್ಯ ದಾಖಲಾತಿಗಳು
ಹೊಸದಾಗಿ ರೇಷನ್ ಕಾರ್ಡ್ ಗೆ (New Ration Card Application) ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ನೀವು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇದೀಗ ಬಯಸುತ್ತಿದ್ದರೆ ನೀವು ಮೊದಲು ನಿಮ್ಮ ಹತ್ತಿರ ಎರಡು ವರ್ಷದ ಹಳೆ ಈ ಶ್ರಮ ಕಾರ್ಡ್ ಇರಬೇಕು ನಂತರ ಈ ಒಂದು ಕಾರ್ಡ್ ತೆಗೆದುಕೊಂಡು ನಿಮ್ಮ ಹತ್ತಿರದ ಮೇಲೆ ತಿಳಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಜೂನ್ 30ರ ಒಳಗಡೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ನಿಮಗೆ ರೇಷನ್ ಕಾರ್ಡ್ ಅರ್ಜಿ ಪ್ರಾರಂಭದ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೊಸ ವಿಷಯಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
2 thoughts on “New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಕೆ ಮಾಡಲು ಇನ್ನು ಕೆಲವೇ ದಿನಗಳು ಅವಕಾಶ”