SSP Scholarship 2025: ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ,
ನಮ್ಮ ಕರ್ನಾಟಕ ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ ಸ್ಕಾಲರ್ಶಿಪ್ ನೀಡುತ್ತಿದೆ.! ಅದೇ ರೀತಿ ಇದೀಗ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 9ನೇ ತರಗತಿ ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಿದೆ.
ಹೌದು ಸ್ನೇಹಿತರೆ ನಾವು ಈ ಒಂದು ಲೇಖನಿಯ ಮೂಲಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಯಾವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಎಷ್ಟು ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಎಂಬ ಮಾಹಿತಿ ತಿಳಿಯೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ (SSP Scholarship 2025).?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಡಿಯಲ್ಲಿ ನಮ್ಮ ರಾಜ್ಯದಲ್ಲಿ ವಾಸ ಮಾಡುವಂಥ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಬೇಕಾಗುವಂತ ಅರ್ಜಿ ಶುಲ್ಕ ಹಾಗೂ ಇತರ ಖರ್ಚು ವೆಚ್ಚಗಳನ್ನು ಸರಿದೂಗಿಸಲು ವಿವಿಧ ಇಲಾಖೆ ಅಡಿಯಲ್ಲಿ ಎಸ್ ಎಸ್ ಪಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿ ವೇತನ ನೀಡುತ್ತಿದೆ

ಇದೀಗ ಒಬ್ಬನೇ ತರಗತಿ ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಪದವಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ವೈದ್ಯಕೀಯ ಕೋರ್ಸ್ ಮತ್ತು ಸ್ನಾತಕೋತ್ತರ ಪದವಿ ಹಾಗೂ ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
ಪ್ರಸ್ತುತ ಯಾವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ..?
ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಂದರೆ ವೃತ್ತಿಪರ ಕೋರ್ಸ್ ಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ
ಅದೇ ರೀತಿ 9ನೇ ತರಗತಿಯಿಂದ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದರೆ ಇದೀಗ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರ ಕಡೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ
ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..?
ಸಮಾಜ ಕಲ್ಯಾಣ ಇಲಾಖೆಯ ಮೂಲಕ 2024 ಮತ್ತು 25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಜೂನ್ 2025 ನಿಗದಿ ಮಾಡಲಾಗಿದೆ
ನೀವು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸರ್ಕಾರದ ಎಸ್ ಎಸ್ ಪಿ ಪೋರ್ಟಲ್ ಗೆ ಭೇಟಿ ನೀಡಿ ಹಾಗೂ ಇನ್ನೂ ಹೆಚ್ಚಿನ ವಿವರಕ್ಕಾಗಿ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲು ಎಲ್ಲಾ ಅಗತ್ಯ ದಾಖಲಾತಿಗಳನ್ನು ರೆಡಿ ಮಾಡಿಕೊಳ್ಳಿ ನಂತರ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭವಾಗುತ್ತದೆ ಮತ್ತು ವಿವಿಧ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
ಇದರಿಂದ ನಿಮಗೆ ಪ್ರತಿದಿನ ಒಂದಲ್ಲ ಒಂದು ಹೊಸ ಸುದ್ದಿಗಳು ಹಾಗೂ ಮಾಹಿತಿ ತಿಳಿಯುತ್ತವೆ
Gold Rate Drops Today : ಇಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟು.?